ರಾಷ್ಟ್ರೀಯ ಪಕ್ಷಗಳಿಗೆ ಠಕ್ಕರ್ ನೀಡೊದಕ್ಕ ದಳಪತಿಗಳ ಸಿದ್ದತೆ ಜೋರಾಗಿದೆ. ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಅನ್ನ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಬೇಕಂತಾ ದೊಡ್ಡಗೌಡ್ರು ಚುನಾವಣಾ ಅಖಾಡಕ್ಕೆ ಎಂಟ್ರಿ ಆಗ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳ ಅಬ್ಬರ ಅದ್ರಲ್ಲೂ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಹೈಕಮಾಂಡ್ ನಾಯಕರಾದ ಅಮಿತ್ ಶಾ ಈಗಾಗಲೇ ರಣತಂತ್ರ ಹೆಣೆದಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ದಾಳಗಳು ಸಾಕಷ್ಟು ಪ್ರಯೋಗವಾಗ್ತಿದೆ. ಒಂದು ಕಡೆ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕಂತ ಕೆಪಿಸಿಸಿ