ರಾಜ್ಯದಲ್ಲಿ ರೈತರ ಆದಾಯ ದ್ವಿಗುಣಗೊಳಿಸಲು ಅಗತ್ಯವಾದ ಕಾರ್ಯತಂತ್ರ ರೂಪಿಸಲು ರೈತರ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯದಲ್ಲಿ ನಿರ್ದಿಷ್ಟವಾಗಿ ಹಮ್ಮಿಕೊಳ್ಳಬಹುದಾದ ಕಾರ್ಯತಂತ್ರಗಳ ಕುರಿತು ರೈತರ ಸಮಿತಿ ವರದಿ ನೀಡಲಿದೆ ಎಂದರು. ಇಂದು ಕೃಷಿ ಉತ್ಪಾದನೆ ಕೇಂದ್ರಿತವಾಗಿದ್ದು, ಆದಾಯ ಕೇಂದ್ರಿತವಾಗಬೇಕಿದೆ. ರೈತರ ಮನಸ್ಥಿತಿಯಲ್ಲಿ ಬದಲಾವಣೆಯಾಗಬೇಕಿದೆ. ಈ ನಿಟ್ಟಿನಲ್ಲಿ ಸಮಿತಿಯು ಕೇಂದ್ರ ಸರ್ಕಾರದ