ಬೆಂಗಳೂರು : ಸ್ವಾತಂತ್ರ ಹೋರಾಟಗಾರ ಹಾಗೂ ಹಿರಿಯ ಸಾಹಿತಿ ನಾಡೋಜ ಕೊ. ಚನ್ನಬಸಪ್ಪ (98) ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚೆನ್ನಬಸಪ್ಪ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಉಸಿರಾಟದ ಸಮಸ್ಯೆಯಿಂದ ನಿಧನರಾಗಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿ ಸೆರೆವಾಸ ಅನುಭವಿಸಿದ್ದರು. 2015ರಲ್ಲಿ ವಿಜಯಪುರದಲ್ಲಿ ನಡೆದ 79ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಇದಲ್ಲದೇ ಅವರು ನಿವೃತ್ತ ಜಿಲ್ಲಾ ನ್ಯಾಯಧೀಶ ಕೂಡ