ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಸೋಮವಾರ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಈ ತಿಂಗಳ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಘೋಷಿಸಿದರು.