ಮಹತ್ವದ ಬೆಳವಣಿಗೆಯೊಂದರಲ್ಲಿ ಸುಮಲತಾ ಅಂಬರೀಶ್ ಬಿಜೆಪಿಯಿಂದ ಕಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡಲಾರಂಭಿಸಿದೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಕಣ್ಕಳಿಯುವುದಾಗಿ ಹೇಳಿರುವ ರೆಬಲ್ ಸ್ಟಾರ್ ಅಂಬರೀಶ್ ಅವರ ಪತ್ನಿ ಸುಮಲತಾ ಅವರಿಗೆ ಬಿಜೆಪಿ ಗಾಳ ಹಾಕಿದೆ. ಸುಮಲತಾ ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಿಂದ ಮಂಡ್ಯದಿಂದ ಕಣ್ಕಳಿಯಲು ಬಯಸಿದ್ದಾರೆ. ಆದರೆ ಇಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿಯಾಗಿರುವ ಸಾಧ್ಯತೆಗಳು ನಿಚ್ಚಳವಾಗಿವೆ. ಸುಮಲತಾ ಅಂಬರೀಶ್ ಅವರಿಗೆ ಟಿಕೇಟ್ ಸಿಗುವ