ಮಹತ್ವದ ಬೆಳವಣಿಗೆಯಲ್ಲಿ ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಅವರು ಬುಧವಾರ ಹಿಂದೆ ಸರಿದಿದ್ದಾರೆ. ಮಹಾರಾಷ್ಟ್ರ-ಕರ್ನಾಟಕ ರಾಜ್ಯಗಳ ನಡುವಿನ ಗಡಿ ವಿವಾದದ ವಿಚಾರಣೆಯ ಮೊಕದ್ದಮೆಯನ್ನು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್, ಹೃಷಿಕೇಶ್ ರಾಯ್ ಮತ್ತು ಬಿವಿ ನಾಗರತ್ನ ಅವರ ಪೀಠದ ಮುಂದೆ ಪಟ್ಟಿ ಮಾಡಲಾಗಿದ್ದು, ರಾಜ್ಯ ಮರುಸಂಘಟನೆ ಕಾಯಿದೆ, 1956 ರ ಸೆಕ್ಷನ್ 3,7 ಮತ್ತು 8 ರ ಕೆಲವು ಭಾಗಗಳನ್ನು ಬಹಿರಂಗಪಡಿಸಲು