ಮೈಸೂರು : ವಿಶ್ವ ಯೋಗ ದಿನಾಚರಣೆ ಹಿನ್ನೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಕಾರ್ಮಿಕರು, ಸರ್ಕಾರಿ ನೌಕರರ ಜೊತೆ ಅರಮನೆ ನಗರಿಯಲ್ಲಿ 15 ಸಾವಿರ ಯೋಗ ಪಟುಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಯೋಗಾಸನ ಮಾಡಿದ್ದಾರೆ.ಖಾಸಗಿ ಹೋಟೆಲಿನಿಂದ ಬೆಳಗ್ಗೆ 6:30ರ ವೇಳೆಗೆ ಅರಮನೆ ಮುಂಭಾಗಕ್ಕೆ ಮೋದಿ ಆಗಮಿಸಿದರು. ಚುಟುಕಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಆರಂಭದಲ್ಲಿ ಆಯುಷ್ ಸಚಿವ ಸರ್ಬಾನಂದ ಸೊನೊವಾಲ್, ಮುಖ್ಯಮಂತ್ರಿ ಬೊಮ್ಮಾಯಿ ಮಾತನಾಡಿದರು.ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಯೋಗದಿಂದ ಆರೋಗ್ಯ ವೃದ್ಧಿಯಾಗುತ್ತದೆ.