ಕೋಳಿ ಮಾಂಸ ಹಾಗೂ ಮೊಟ್ಟೆ ಮಾರಾಟದಿಂದಾಗಿ ಸಚಿವರೊಬ್ಬರು ಫುಲ್ ಖುಷ್ ಆಗಿದ್ದಾರೆ. ಸದ್ಯ ಕುಕ್ಕುಟೋದ್ಯಮ ಚೇತರಿಕೆ ಕಾಣುತ್ತಿದ್ದು, ಕೋಳಿ ಮಾಂಸ ಮತ್ತು ಮೊಟ್ಟೆಯ ಮಾರಾಟದಲ್ಲಿ ಗಣನೀಯವಾದ ಏರಿಕೆಯಾಗಿರುವುದು ಸಂತಸ ತಂದಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಕೋವಿಡ್-19 ಲಾಕ್ಡೌನಗಿಂತ ಮೊದಲು ರಾಜ್ಯದಲ್ಲಿ ಪ್ರತಿ ದಿನ ಸುಮಾರು 600 ರಿಂದ 700 ಮೆಟ್ರಿಕ್ ಟನ್ ಕೋಳಿ ಮಾಂಸ