ಬಳ್ಳಾರಿ : ವಿಶ್ವ ವಿಖ್ಯಾತ ಹಂಪಿಯಲ್ಲಿ ಇದೇ ಮೊದಲ ಬಾರಿಗೆ ಜಿ-20 ಶೃಂಗಸಭೆ ನಡೆಯುತ್ತಿದೆ. ಜುಲೈ 9ರಿಂದ 16 ರವರೆಗೆ ನಡೆಯಲಿರುವ ಜಿ-20 ಶೃಂಗಸಭೆಗೆ ಹಂಪಿ ನವವಧುವಿನಂತೆ ಶೃಂಗಾರಗೊಂಡಿದೆ. ಹಿಂದೆಂದೂ ಕಾಣದಷ್ಟು ಅಭಿವೃದ್ಧಿ ಕಾರ್ಯಗಳನ್ನು ಜಿ-20 ಸಲುವಾಗಿ ಹಂಪಿಯಲ್ಲಿ ಕೈಗೊಳ್ಳಲಾಗಿದೆ. ಜಿ-20 ಶೃಂಗಸಭೆಗೆ ಈ ಬಾರಿಯ ಅಧ್ಯಕ್ಷೀಯ ರಾಷ್ಟ್ರ ಭಾರತವಾಗಿದೆ. ಅದಕ್ಕಾಗಿಯೇ ಅತಿ ಮುಖ್ಯವಾದ ಜಿ-20 ಶೃಂಗಸಭೆಯ 3ನೇ ಪ್ರಮುಖ ಸಭೆ ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಇಂದಿನಿಂದ 16 ರವರೆಗೆ