ಸರಕಾರದಲ್ಲಿ ಕೆಲಸವಾಗಲು ಸೂಟ್ಕೇಸ್ ಕೊಡಬೇಕು ಎನ್ನುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಮಲ್ಲಿಕಾ ಘಂಟಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗರಂ ಆಗಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿರುವ ಮಲ್ಲಿಕಾ ಘಂಟಿ ಅವರೇ ನೀಡಿದ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಬೇಕು. ಮನಬಂದಂತೆ ಸರಕಾರದ ವಿರುದ್ಧ ಹೇಳಿಕೆ ನೀಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಯಾರು, ಎಲ್ಲಿ, ಯಾವಾಗ ಯಾರಿಗೆ ಸೂಟಕೇಸ್ ಕೊಟ್ಟಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ಇಲ್ಲವಾದಲ್ಲಿ ಪುರಾವೆಗಳಿಲ್ಲದ ಹೇಳಿಕೆಗಳಿಗೆ ಅರ್ಥವಿಲ್ಲ ಎಂದು ತಿರುಗೇಟು