ಬೆಂಗಳೂರು: ಮಹದಾಯಿ ಹೋರಾಟಗಾರರ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ ಅವರಿಗೆ ತುರ್ತು ಕರೆ ಮಾಡಿ ಚರ್ಚೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜತೆ ಮಹದಾಯಿ ಹೋರಾಟದ ಬಗ್ಗೆ ಚರ್ಚಿಸಿದ ಪರಮೇಶ್ವರ್, ಈಗಾಗಲೇ ಬಿಜೆಪಿಯವರು ಈ ವಿಚಾರದಲ್ಲಿ ನೆಗೆಟಿವ್ ಆಗಿ ಬಿಂಬಿತವಾಗಿದ್ದಾರೆ. ನಾವೂ ಹಾಗೇ ಆಗುವುದು ಬೇಡ. ಅನಗತ್ಯವಾಗಿ ಮಾಧ್ಯಮಗಳ ಮುಂದೆ ಯಾರೂ ಹೇಳಿಕೆ ನೀಡುವುದು ಬೇಡ ಎಂದು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಅಷ್ಟೇ