ಹುಬ್ಬಳ್ಳಿ: ಮೊದಲು ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರಯತ್ನ ನಡೆಸುತ್ತೇವೆ. ಸಿಎಂ ಯಾರಾಗಬೇಕೆಂಬುದು ನಂತರ ತೀರ್ಮಾನವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಕುತೂಹಲಕಾರಿ ಹೇಳಿಕೆ ನೀಡಿದ್ದಾರೆ.ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸಿಎಂ ಸಿದ್ದರಾಮಯ್ಯನವರೇ ಮತ್ತೆ ಸಿಎಂ ಆಗುತ್ತಾರೆ ಎಂಬ ಎಲ್ಲರ ನಂಬಿಕೆಗೆ ಈ ಹೇಳಿಕೆ ಗೊಂದಲ ಮೂಡಿಸಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅನುಮಾನವೇ ಬೇಡ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಮಗೆ ಜನರ ಮೇಲೆ