ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಆಯಸ್ಸಿನ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆಂಬ ವಿಡಿಯೋ ವೈರಲ್ ಆದ ಬಳಿಕ ಡಿಸಿಎಂ ಪರಮೇಶ್ವರ್ ಗರಂ ಆಗಿದ್ದಾರೆ.ಎಲ್ಲೇ ಹೋದರೂ ಮಾಧ್ಯಮಗಳು ಮತ್ತೆ ಮತ್ತೆ ಇದೇ ಪ್ರಶ್ನೆ ಕೇಳುತ್ತಿರುವುದಕ್ಕೆ ಅವರು ಸಿಡಿಮಿಡಿಗೊಂಡ ಘಟನೆ ನಡೆದಿದೆ. ಸಿದ್ದರಾಮಯ್ಯ ಅಂತ ಪತ್ರಕರ್ತರು ಪ್ರಶ್ನೆ ಕೇಳಲು ಮುಂದಾಗುತ್ತಿದ್ದ ಹಾಗೇ ಸುಮ್ನಿರಯ್ಯಾ ಅಂತ ಗದರಿ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತೆ ಎಂದಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿನ್ನೆಯ ಹೇಳಿಕೆಯನ್ನೇ ಪುನರುಚ್ಚರಿಸಿದರು. ಕೆಲವರು ಈ