ಬೆಂಗಳೂರು: ಸಿದ್ದರಾಮಯ್ಯ ಹೇಳಿಕೆಯಿಂದಾಗಿ ಸಮ್ಮಿಶ್ರ ಸರ್ಕಾರಕ್ಕೆ ಉಂಟಾಗಿರುವ ಡ್ಯಾಮೇಜ್ ಸರಿಪಡಿಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಪರಮೇಶ್ವರ್ ಮುಂದಾಗಿದ್ದಾರೆ.ಸಿದ್ದರಾಮಯ್ಯ ನಮ್ಮ ಸಮನ್ವಯ ಸಮಿತಿ ಅಧ್ಯಕ್ಷರು. ಅವರಿಗೆ ತಮ್ಮ ಜವಾಬ್ಧಾರಿ ಗೊತ್ತಿದೆ. ಅವರು ಏನೋ ಹೇಳಿದರೆ ಅದನ್ನು ಇನ್ಯಾರೋ ಬೇರೆ ರೀತಿ ತಿರುಚಿದ್ದಾರೆ ಎಂದು ಪರಮೇಶ್ವರ್ ಸಮಜಾಯಿಷಿ ನೀಡಿದ್ದಾರೆ.ಅಷ್ಟೇ ಅಲ್ಲದೆ, ಜೂನ್ 30 ರಂದು ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಆಗ ಇದರ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದ್ದಾರೆ.