ಗೃಹ ಸಚಿವ ಜಿ.ಪರಮೇಶ್ವರ್ ಸಲ್ಲಿಸಿದ್ದ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ರವಾನಿಸಿದ ಹಿನ್ನೆಲೆಯಲ್ಲಿ, ಮುಂದಿನ ಗೃಹ ಸಚಿವರು ಯಾರು ಎನ್ನುವ ಕುತೂಹಲ ಕೆರಳಿಸಿದೆ. ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ, ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು. ಹೈಕಮಾಂಡ್ ಆದೇಶದ ಮೇರೆಗೆ ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡಿದ್ದರು. ಆದರೆ, ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಸಚಿವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯ ರಾಜ್ಯಪಾಲರಿಗೆ ರವಾನಿಸಿರಲಿಲ್ಲ.