ಬೆಂಗಳೂರು: ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಹಣ ವ್ಯವಹಾರ ನಡೆಯುತ್ತಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿ ವಿವಾದಕ್ಕೀಡಾದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯಿಲಿ ಪರ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬ್ಯಾಟಿಂಗ್ ಮಾಡಿದ್ದಾರೆ.ವೀರಪ್ಪ ಮೊಯಿಲಿ ತಮ್ಮ ಹೇಳಿಕೆಗೆ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಅವರು ಟ್ವೀಟ್ ಮಾಡಿಲ್ಲ ಎಂದಿದ್ದಾರೆ. ಈ ಬಗ್ಗೆ ಸೈಬರ್ ಕ್ರೈಂ ವಿಭಾಗದಿಂದ ಪರಿಶೀಲನೆಯಾಗಲಿದೆ. ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.ಅಷ್ಟೇ ಅಲ್ಲ