ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ ಹೈಕಮಾಂಡ್ಗೆ ಸಾವಿರ ಕೋಟಿ ರೂಪಾಯಿ ಕಪ್ಪ ಕೊಟ್ಟ ಬಗ್ಗೆ ದಾಖಲೆಯಿದೆ ಎಂದು ಹೇಳುತ್ತಿದ್ದಾರೆ. ಅವರು ದಾಖಲೆ ಬಿಡುಗಡೆ ಮಾಡುವುದನ್ನೇ ನಾವು ಕಾಯುತ್ತಿದ್ದೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ರಾಜ್ಯಾಧ್ಯಕ್ಷರಾಗಿ ಯಡಿಯೂರಪ್ಪ ತುಂಬಾ ಜವಾಬ್ದಾರಿಯಿಂದ ಆರೋಪ ಮಾಡಬೇಕು. ಆರೋಪ ಮಾಡಿದ ಮೇಲೆ ಅದನ್ನು ಸಾಬೀತುಪಡಿಸಬೇಕು. ಇಲ್ಲವಾದಲ್ಲಿ ಆರೋಪಗಳಿಗೆ ಅರ್ಥವಿರುವುದಿಲ್ಲ ಎಂದು ಕಿಡಿಕಾರಿದ್ದಾರೆ. ಪ್ರತಿನಿತ್ಯ ಡೈರಿಯಲ್ಲಿ ಸಾವಿರ ಕೋಟಿ ರೂಪಾಯಿ ಕಪ್ಪ