ರಾಜಭವನದಲ್ಲಿ ನಡೆದ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗೈರುಹಾಜರಾಗಿರುವುದು ಹುಬ್ಬೇರಿಸುವಂತೆ ಮಾಡಿದೆ. ನಗರದ ಸದಾಶಿವ ನಗರದ ನಿವಾಸದಲ್ಲಿಯೇ ಇರುವ ಜಿ.ಪರಮೇಶ್ವರ್ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಗೈರಾಗಲು ಸಿಎಂ ಸಿದ್ದರಾಮಯ್ಯರೊಂದಿಗೆ ಇರುವ ಭಿನ್ನಾಭಿಪ್ರಾಯ ಕಾರಣ ಎಂದು ಮೂಲಗಳು ತಿಳಿಸಿವೆ. ಷಡಕ್ಷರಿಗೆ ಸಚಿವ ಸ್ಥಾನ ನೀಡುವ ಬದಲಿಗೆ ಗೀತಾ ಮಹಾದೇವ ಪ್ರಸಾದ್ ಅವರಿಗೆ ನೀಡಿರುವುದು, ನರೇಂದ್ರ ಸ್ವಾಮಿಗೆ ಸಚಿವ ಸ್ಥಾನ ನಿರಾಕರಿಸಿರುವ ಸಿಎಂ ಸಿದ್ದರಾಮಯ್ಯ