ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ತಳ್ಳಿಹಾಕಿದ್ದು ಸರದಿ ಪ್ರಕಾರವೇ ವಿಚಾರಣೆ ನಡೆಸುವುದಾಗಿ ಆದೇಶ ನೀಡಿದೆ. ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಐಪಿಎಸ್ ಅಧಿಕಾರಿಗಳಾದ ಎಂ.ಎಂ.ಪ್ರಸಾದ್ ಹಾಗೂ ಮೊಹಾಂತಿ