ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳ ತಂಡ ಗಣಪತಿ ಅವರ ಮಂಗಳೂರಿನ ಫ್ಲ್ಯಾಟ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿಚೈನಲ್ಲಿನ ಪ್ರಾವಿಡೆಟ್ ಅಪಾರ್ಟ್ಮೆಂಟ್ನಲ್ಲಿರುವ ಎಂ.ಕೆ.ಗಣಪತಿ ಅವರ ಫ್ಲ್ಯಾಟ್ಗೆ ಭೇಟಿ ನೀಡಿದ ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸಿಐಡಿ ಅಧಿಕಾರಿಗಳು ಮಂಗಳೂರಿಗೆ ಭೇಟಿ ನೀಡಿ