ಮಧ್ಯಪ್ರದೇಶದ ಭೋಪಾಲ್ ನೀರು ಸಂಸ್ಕರಣಾ ಘಟಕದಲ್ಲಿ ಕ್ಲೋರಿನ್ ಅನಿಲ ಸೋರಿಕೆಯಾದ ಹಿನ್ನೆಲೆಯಲ್ಲಿ ಉಸಿರಾಟದ ತೊಂದರೆಯಿಂದ ಬುಧವಾರ ತಡರಾತ್ರಿ ಹಲವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನೂ ಅನೇಕರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರ ಕಣ್ಣುಗಳಲ್ಲಿ ಕಿರಿಕಿರಿ ಮತ್ತು ಉಸಿರಾಟದ ತೊಂದರೆಯನ್ನು ಅನುಭವಿಸಿದ್ದಾರೆ. ಮಧ್ಯಪ್ರದೇಶದ ಭೋಪಾಲ್ನಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಈ ಘಟನೆ ನಡೆದಿದ್ದು, ಅನಿಲ ಸೋರಿಕೆಯಿಂದಾಗಿ ಅನೇಕ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆ ಭೋಪಾಲ್ ಜಿಲ್ಲಾಧಿಕಾರಿ ಹಾಗೂ ಮುನ್ಸಿಪಲ್ ಕಾರ್ಪೊರೇಷನ್