ಅನಿಲ ಟ್ಯಾಂಕರೊಂದು ಮಗುಚಿ ಬಿದ್ದು, ಅಪಾರ ಪ್ರಮಾಣದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಬಳಿಯ ಬೆದ್ರೋಡಿ ಎಂಬಲ್ಲಿ ತಡರಾತ್ರಿ ಅನಿಲ ಟ್ಯಾಂಕರೊಂದು ಮಗುಚಿ ಬಿದ್ದಿದೆ. ಟ್ಯಾಂಕರ್ ಬಿದ್ದ ರಭಸಕ್ಕೆ ಅಪಾರ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿರುವುದರಿಂದ ಆಸುಪಾಸಿನ ಸುಮಾರು 2 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ ಬೆಂಕಿ ಉರಿಸದಂತೆ ಎಚ್ಚರಿಕೆ ನೀಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ.ತಡರಾತ್ರಿ 2 ಗಂಟೆ ಸುಮಾರಿಗೆ