ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ತಕ್ಷಣವೇ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಕೊಲೆಗೈದಿರುವ ಹಂತಕರನ್ನು ಬಂಧಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ರಾಜ್ನಾಥ್ ಸಿಂಗ್ ಹೇಳಿದ್ದಾರೆ. ಬೆಂಗಳೂರಿನ ಮುರುಗೇಶ್ ಪಾಳ್ಯದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿದ್ಧರಾಮಯ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಾಮಾಜಿಕ ಕಾರ್ಯಕರ್ತರ ಹತ್ಯೆಗಳು ನಡೆಯುತ್ತಿವೆ. ಪತ್ರಕರ್ತರ ಹತ್ಯೆ ನಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು