ವಿಶೇಷ ತನಿಖಾ ತಂಡದ ಅಧಿಕಾರಿಗಳು ಹಗಲಿರಳು ಎನ್ನದೇ ಹಂತಕರ ಜಾಡು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರವು ಅಗತ್ಯ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತನಿಖೆ ನಡೆಸುತ್ತಿರುವ ತನಿಖಾ ತಂಡಕ್ಕೆ ದೂರವಾಣಿ ಮುಖಾಂತರವಾಗಲಿ ಅಥವಾ ಇ-ಮೇಲ್ ಮೂಲಕವಾಗಲಿ ಮಾಹಿತಿ ನೀಡಬಹುದು. ಇಲ್ಲವೇ ನೇರವಾಗಿ ತಮ್ಮನ್ನು ಭೇಟಿಯಾಗಿ ಸುಳಿವು ನೀಡಬಹುದು ಎಂದು ತಿಳಿಸಿದ್ದಾರೆ. ಗೌರಿ ಲಂಕೇಶ್ ಹತ್ಯೆ ತನಿಖೆಯ ಹೊಣೆಯನ್ನು ವಿಶೇಷ ತನಿಖಾ ತಂಡ(ಎಸ್ಐಟಿ)ವಹಿಸಿಕೊಂಡಿದ್ದು, ಶೀಘ್ರಧಲ್ಲಿಯೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ