ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಗರದಲ್ಲಿ ಬೃಹತ್ ಪಂಜಿನ ಮೆರವಣಿಗೆ ಆಯೋಜಿಸಲಾಗಿದೆ. ನಗರದ ಪ್ರಮುಖ ರಸ್ತೆಗಳ ಮೂಲಕ ಸಾಗಿದ ಪಂಜಿನ ಮೆರವಣಿಗೆಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ, ರೈತ ಸಂಘ ಪ್ರಗತಿಪರ ಸಂಘಟನೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ಪ್ರಗತಿಪರ ಚಿಂತಕರು, ವಿಚಾರವಾದಿಗಳು ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಹಿರಿಯ ಸಂಶೋಧಕ ಕಲಬುರಗಿ ಹತ್ಯೆಯಾಗಿ ಎರಡು ವರ್ಷಗಳೇ ಕಳೆದಿದ್ದರೂ ಹಂತಕರ ಪತ್ತೆಯಾಗಿಲ್ಲ