ಹಿರಿಯ ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ವಿಶೇಷ ತಂಡದಿಂದ ತನಿಖೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಮಹಾನಿರ್ದೇಶಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲಾಗುವುದು ಎಂದು ತಿಳಿಸಿದ್ದಾರೆ. ಸಭೆಯಲ್ಲಿ ಸಿಬಿಐಗೆ ಕೊಡುವ ಬಗ್ಗೆ ಕೂಡಾ ಗಂಭೀರವಾಗಿ ಚರ್ಚೆ ನಡೆದಿದೆ. ಆದರೆ, ಕೊನೆಗೆ ವಿಶೇಷ ತನಿಖಾ ತಂಡ ರಚಿಸಿ ಗೌರಿ ಲಂಕೇಶ್ ಪ್ರಕರಣವನ್ನು ಭೇಧಿಸಬೇಕು ಎನ್ನುವ ಒಲವು