ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ ಎಂದು ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ ಹೇಳಿದ್ದಾರೆ. ವಿಶೇಷ ತನಿಖಾ ತಂಡದ ಅಧಿಕಾರಿಗಳು ಇಂದು ಸಂಜೆ ನನ್ನ ಮನೆಗೆ ಆಗಮಿಸಿ ಹೇಳಿಕೆ ಪಡೆದಿದ್ದಾರೆ ಎಂದು ಮುತ್ತಪ್ಪ ರೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಗೌರಿ ಲಂಕೇಶ್ರೊಂದಿಗೆ ನನಗೆ ಯಾವುದೇ ಸಂಪರ್ಕವಿರಲಿಲ್ಲ. ಕಳೆದ 2003ರಲ್ಲಿ ನನ್ನ ವಿರುದ್ಧ ಲೇಖನ ಬರೆದಿದ್ದಕ್ಕಾಗಿ