ಚಿಕ್ಕಬಳ್ಳಾಪುರ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು, ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಡೆದ ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದೇನೆ. ತನಿಖೆ ನಡೆದಿದ್ದು, ಹಂತಕರು ಯಾರು ಎಂದು ತಿಳಿದಿದೆ. ಶೀಘ್ರದಲ್ಲೇ ಆರೋಪಿಗಳು ಯಾರು ಎಂದು ಪ್ರಕಟಿಸುತ್ತೇವೆ. 100ಕ್ಕೆ 100ರಷ್ಟು ಹಂತಕರನ್ನು ಬಂಧಿಸುತ್ತೇವೆ.