ಡಿವೈಎಸ್ಪಿ ಎಂ.ಕೆ.ಗಣಪತಿ ಪ್ರಕರಣದಲ್ಲಿ ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಅವರಿಗೆ ಅವಸರದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಸರಕಾರದ ಒತ್ತಡದಿಂದಾಗಿ ಸಿಐಡಿ ಅಧಿಕಾರಿಗಳು ಸಚಿವ ಜಾರ್ಜ್ಗೆ ಕ್ಲೀನ್ ಚಿಟ್ ನೀಡಿದ್ದಾರೆ ಎನ್ನುವುದು ಸಿಬಿಐ ತನಿಖೆಯಲ್ಲಿ ಬಹಿರಂಗವಾಗಿದೆ. ಗಣಪತಿ ಆತ್ಮಹತ್ಯೆ ಮಾಡಿಕೊಂಡ ಕೋಣೆಯನ್ನು ಸಿಬಿಐ ಅಧಿಕಾರಿಗಳು ತನಿಖೆ ನಡೆಸಿದಾಗ ಬುಲೆಟ್ ಪತ್ತೆಯಾಗಿರುವುದು ಕಂಡುಬಂದಿದೆ ಎಂದರು. ಹಿಂದೆ ಸಿಐಡಿ ಅಧಿಕಾರಿಗಳು ಯಾವ ರೀತಿ ಕೋಣೆಯನ್ನು ಮಹಜರು