ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ತನಿಖೆಗೆ ಆದೇಶಿಸಿದ್ದರಿಂದ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಸಚಿವ ಕೆ.ಜೆ.ಜಾರ್ಜ್ ಮೂರು ದಿನಗಳೊಳಗಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ, ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವ ಸಂಪುಟದಿಂದ ಕಿತ್ತೊಗೆಯಬೇಕು ಎಂದು ಗಡುವು ನೀಡಿದ್ದಾರೆ. ಮೂರು ದಿನಗಳೊಳಗೆ ಸಚಿವ ಜಾರ್ಜ್ ರಾಜೀನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು