ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಹಾಯಾಗಿ ತಿರುಗಾಡುತ್ತಿದ್ದ ಖತರ್ನಾಕ್ ಪುಂಡರ ಗ್ಯಾಂಗ್ ಬಂಧನ ಮಾಡಲಾಗಿದೆ.ರಾಜಧಾನಿ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಜನರ ನಿದ್ದೆಗೆಡಿಸಿದ್ದ ಖತರ್ನಾಕ್ ಪುಂಡರು ಈಗ ಕಂಬಿ ಹಿಂದೆ ಸರಿದಿದ್ದಾರೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಗ್ಯಾಂಗ್ ಕೊನೆಗೂ ಖಾಕಿ ಪಡೆ ಹೆಣೆದ ಬಲೆಯಲ್ಲಿ ಸಿಲುಕಿ ಬಂಧನಕ್ಕೆ ಒಳಗಾಗಿದೆ. ಬಂಧಿತರಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮಗನೂ ಸೇರಿದ್ದಾನೆ.ಆನೇಕಲ್ ಜನತೆಗೆ ನಿದ್ದೆಗೆಡಿಸಿದ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಆನೇಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಕಾರ್ಯಚರಣೆ ನಡೆಸಿ