ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾಗಿದ್ದಾರೆ. ಇವರಿಗೆ 81 ವರ್ಷ ವಯಸ್ಸಾಗಿದ್ದು, ಕಳೆದ 1 ತಿಂಗಳಿನಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಲ್ಯಾವೆಲ್ಲಾ ರಸ್ತೆಯ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ರಘುನಾಥ್ ಮತ್ತು ಕೃಷ್ಣಾಬಾಯಿ ದಂಪತಿಗಳ ಮಗನಾದ ಗಿರೀಶ್ ಕಾರ್ನಾಡ್ ಅವರು 1938ರ ಮೇ 19 ರಂದು ಮಹಾರಾಷ್ಟ್ರದ ಮಾಥೆರನ್ ನಲ್ಲಿ ಜನಿಸಿದ್ದಾರೆ. ಸಾಹಿತಿ, ನಟ,