ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ನಿಧನರಾದ ಹಿನ್ನಲೆಯಲ್ಲಿ ಇವರ ಸಾವಿಗೆ ರಾಜಕೀಯ ನಾಯಕರುಗಳು ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ ಕೇಂದ್ರ ಸಚಿವ ಸದಾನಂದಾ ಗೌಡರು, ಸಾರಸ್ವತ ಲೋಕಕ್ಕೆ ಅವರ ಕೊಡುಗೆ ಅಪಾರ .ಅಗಲಿದ ಆತ್ಮಕ್ಕೆ ಶಾಂತಿ ದೊರೆಯಲೆಂದು ಭಗವಂತನಲ್ಲಿ ಪ್ರಾರ್ಥಿಸೋಣ ಎಂದು ಸಂತಾಪ ಸೂಚಿಸಿದ್ದಾರೆ. ಹಾಗೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಹಿರಿಯ ಸಾಹಿತಿ,ಚಿಂತಕ, ಜ್ಞಾನಪೀಠ