ಭುವನೇಶ್ವರ : ಶಾಲಾ ಪ್ರಾರ್ಥನೆ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ನಡೆದಿದೆ.ಧಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ಸಾರ್ನಲ್ಲಿರುವ ಸರ್ಕಾರಿ ಶಾಲೆಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೆಳಗಿನ ಪ್ರಾರ್ಥನೆ ವೇಳೆ ಆಕೆ ಹಠಾತ್ತನೆ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಳು ಎಂದು ಆಕೆಯ ಸಹಪಾಠಿಗಳು ಹೇಳಿದ್ದಾರೆ. ಬಾಲಕಿಯನ್ನು ತಕ್ಷಣ ತರಗತಿಯೊಳಗೆ ಕರೆದೊಯ್ದು ಆಕೆಯನ್ನು ಎಚ್ಚರಗೊಳಿಸಲು ಶಿಕ್ಷಕರು ಸಾಕಷ್ಟು ಪ್ರಯತ್ನಿಸಿದರು. ಆದರೆ ಯಾವುದೇ ಪ್ರಯೋಜನವಾಗಲಿಲ್ಲ.ಹಾಗಾಗಿ