ಮಂಗಳೂರು : ನಗರದ ಹೊರವಲಯದ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ ಕಾರ್ಯನಿರ್ವಹಿಸುತ್ತಿರುವ ಟೈಲ್ಸ್ ಫ್ಯಾಕ್ಟರಿಯೊಂದರ ಆವರಣದ ಚರಂಡಿಯಲ್ಲಿ ಭಾನುವಾರ ಸಂಜೆ 8 ವರ್ಷದ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿ ಕೊಲೆ ಮಾಡಿ ಚರಂಡಿಗೆ ಎಸೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಝಾರ್ಖಂಡ್ ಮೂಲದ, ಟೈಲ್ಸ್ ಫ್ಯಾಕ್ಟರಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ದಂಪತಿಯ ಪುತ್ರಿಯ ಮೃತದೇಹ ಇದಾಗಿದೆ ಎಂದು ಗುರುತಿಸಲಾಗಿದೆ. ಕುಟುಂಬ ಟೈಲ್ಸ್ ಫ್ಯಾಕ್ಟರಿಯಲ್ಲಿ ದುಡಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲೇ ವಾಸಿಸುತ್ತಿದ್ದರು.