ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ದುಷ್ಕರ್ಮಿಗಳು ಹತ್ಯೆಗೈದ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಚಿಂತಾಮಣಿ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಗ್ರಾಮದ ಹೊರವಲಯದಲ್ಲಿ ಅತ್ಯಾಚಾರವೆಸಗಿ ನಂತರ ಕತ್ತುಹಿಸುಕಿ ಹತ್ಯೆಗೈಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಾಲಕಿಯ ಪೋಷಕರು ರಾತ್ರಿಯಿಡಿ ಹುಡುಕಾಟ ನಡೆಸಿದ್ದರೂ ಬಾಲಕಿ ಪತ್ತೆಯಾಗಿರಲಿಲ್ಲ. ಮಾರನೇ ದಿನ ಗ್ರಾಮದ ಹೊರವಲಯದಲ್ಲಿ ಬಾಲಕಿಯ ಜರ್ಜರಿತ ಮೃತದೇಹ ಪತ್ತೆಯಾಗಿತ್ತು. ಅಪರಿಚಿತ ಆರೋಪಿಗಳ ವಿರುದ್ಧ