ರಾಜ್ಯದಲ್ಲಿರುವ ಎಲ್ಲ ಸಕ್ಕರೆ ಕಾರ್ಖಾನೆಗಳು ಉಪ ಉತ್ಪಾದನೆಗಳನ್ನು ಸಿದ್ಧಪಡಿಸಿದ ಅದರಿಂದ ಬರುವ ಲಾಭಾಂಶವನ್ನು ನೇರವಾಗಿ ರೈತರಿಗೆ ಕೊಡುವಂತೆ ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಮನವಿ ಮಾಡಲಾಗಿದೆ ಎಂದು ಜವಳಿ, ಕೈಮಗ್ಗ ಮತ್ತು ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ತಿಳಿಸಿದ್ದಾರೆ.ರಾಜ್ಯದ ಸಕ್ಕರೆ ಕಾರ್ಖಾನೆಗಳು ಉತ್ಪಾದಿಸುವ ಎಥನಾಲ್ ಅನ್ನು ಆದಾಯ ಹಂಚಿಕೆ ಸೂತ್ರದ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಚರ್ಚಿಸಲು ಇಂದು ರಾಜ್ಯದಲ್ಲಿ ಎಥನಾಲ್ ಘಟಕಗಳನ್ನು ಹೊಂದಿರುವ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು ಮಾಲೀಕರ ಜತೆ