ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ ರೇವಣ್ಣ ಅವರನ್ನು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದ್ದು, ಈ ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ದುಮುಕಿದ್ದಾರೆ.ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಂ.ಫಾರೂಕ್ ಅವರು ಪ್ರಜ್ವಲ ರೇವಣ್ಣ ಅವರನ್ನು ನೇಮಿಸಿದ್ದಾರೆ.ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂಬ ಆಕಾಂಕ್ಷೆಯನ್ನು ಪ್ರಜ್ವಲ ಹೊಂದಿದ್ದು, ಪಕ್ಷ ಯಾವ ತೀರ್ಮಾನ ಕೈಗೊಳ್ಳುತ್ತದೆ ಎಂಬುದು ಕಾದು