ಚಾಮರಾಜನಗರ : ನಿನ್ನೆಯವರೆಗೂ ಕೂಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತೊಮ್ಮೆ ಬಿಜೆಪಿ ಎಂಬ ಪೋಸ್ಟರ್ ಕೊಳ್ಳೇಗಾಲ ಕ್ಷೇತ್ರದ ತುಂಬಾ ಹರಿದಾಡುತ್ತಿತ್ತು. ಆದರೆ ಬೆಳಗಾಗುವುದರೊಳಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಮ್ಮೆ ಕಾಂಗ್ರೆಸ್ ಎಂಬ ಪೋಸ್ಟರ್ ಅಳವಡಿಸಲಾಗಿದೆ. ರಾಜಕೀಯ ಮೇಲಾಟಕ್ಕೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಸಾಕ್ಷಿಯಾಗಿದೆ. ಕೊಳ್ಳೇಗಾಲದ ಮಾಜಿ ಶಾಸಕ ಜಿಎನ್ ನಂಜುಂಡಸ್ವಾಮಿ ಬಿಜೆಪಿಯಿಂದ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಉಪಾಧ್ಯಕ್ಷರು ಕೂಡಾ ಆಗಿರುವ