ಬೆಂಗಳೂರು: ಮಹದಾಯಿ ಜಲ ವಿವಾದ ವಿಚಾರದಲ್ಲಿ ಕರ್ನಾಟಕ ಸಿಎಂಗೆ ಪತ್ರ ಬರೆಯುವ ಬದಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಪತ್ರ ಬರೆದ ಗೋವಾ ಸಿಎಂ ಮನೋಹರ್ ಪರಿಕ್ಕರ್ ರದ್ದು ಡರ್ಟಿ ಪೊಲಿಟಿಕ್ಸ್ ಎಂದು ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಟೀಕಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ನಾಯಕರು ದೆಹಲಿಯಲ್ಲಿ ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಗೋವಾ ಸಿಎಂ ಪರಿಕ್ಕರ್ ಜತೆ ಜಲ ವಿವಾದ ಕುರಿತು ಚರ್ಚಿಸಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರದ