ಧಾರವಾಡ : ಹುಬ್ಬಳ್ಳಿ ಹೊರವಲಯದ ತಾರಿಹಾಳದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಚಾಲಕ, ಕ್ಲೀನರ್ ಸೇರಿದಂತೆ 9 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಮತ್ತು 24 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರ ಸ್ಥಿತಿ ಚಿಂತಾಜನಕವಾಗಿದೆ.ಹುಬ್ಬಳ್ಳಿ ಹೊರವಲಯದ ತಾರಿಹಾಳ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿಚೀಲಗಳೊಂದಿಗೆ ಧಾರವಾಡ ಕಡೆ