ಬೆಂಗಳೂರು : ಪಕ್ಷದ ಏಳಿಗೆಗಾಗಿ, ಪಕ್ಷವನ್ನು ಬೆಳೆಸಲು ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ.ಆ ವಿಶ್ವಾಸದೊಂದಿಗೆ ಇಲ್ಲಿಂದ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡಿದ್ದಾರೆ.ವಿಧಾನ ಸಭೆಯಲ್ಲಿ ಮಾತನಾಡಿದ ಅವರು, ಈ ಸದನದವನ್ನು ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು