ರಾತ್ರಿ ವೇಳೆ ಬಹಿರ್ದೆಸೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಕಾಲು ಜಾರಿ ಸುಮಾರು 60 ಅಡಿ ಆಳದ ತೆರೆದ ಬಾವಿಗೆ ಬಿದ್ದ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಹೊಸಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎನ್. ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.ಬಾವಿಗೆ ಬಿದ್ದ ವ್ಯಕ್ತಿಯನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ಹನುಮಂತಪ್ಪ ನಂತರ ಮೇಲೆ ಬರಲು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗಲಿಲ್ಲ. ನಂತರ ರಕ್ಷಣೆ ಮಾಡುವಂತೆ ಕೂಗಾಡಿಕೊಂಡಿದ್ದಾರೆ. ಹನುಮಂತಪ್ಪನ ಕೂಗಾಟ ಕೇಳಿ ಸ್ಥಳೀಯರು ಬಾವಿಯ ಬಳಿ