ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಾಹಿತ್ಯ ಪ್ರೇಮಿಗಳಿಗೆ ಶುಭ ಸುದ್ದಿ

ಬೆಂಗಳೂರು| Jagadeesh| Last Modified ಸೋಮವಾರ, 6 ಆಗಸ್ಟ್ 2018 (20:19 IST)
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ ಮಾಹೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪುಸ್ತಕ ಪ್ರೇಮಿಗಳಿಗೆ ಬಂಪರ್ ಆಫರ್ ದೊರೆಯಲಿದೆ. ಇಲಾಖೆಯಿಂದ ಪ್ರಕಟವಾಗಿರುವ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಎಲ್ಲ ಪ್ರಕಾರದ ಪುಸ್ತಕಗಳು ಶೇ. 50ರ ರಿಯಾಯಿತಿ ದರದಲ್ಲಿ ದೊರೆಯಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ತಿಳಿಸಿದ್ದಾರೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎಲ್ಲ ಜಿಲ್ಲಾ ಕಚೇರಿಗಳಲ್ಲಿ, ಪ್ರಾಧಿಕಾರದಿಂದ ತೆರೆಯಲಾದ ಜಿಲ್ಲೆಯ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳನ್ನು ಪುಸ್ತಕಗಳು ರಿಯಾಯಿತಿ ದರದಲ್ಲಿ ದೊರೆಯಲಿದೆ.

ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 360 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರವು ಹೊಂದಿದೆ.


ಇದರಲ್ಲಿ ಇನ್ನಷ್ಟು ಓದಿ :