ಚಾಮರಾಜನಗರ : ಮಾದಪ್ಪನ ದರ್ಶನ ಪಡೆಯಲು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ.ದಟ್ಟಾರಣ್ಯದಲ್ಲಿ ಕಲ್ಲುಮುಳ್ಳಿನ ಹಾದಿ ನಡುವೆಯೂ ಮಹದೇಶ್ವರನ ದರ್ಶನ ಮಾಡುತ್ತಾರೆ. ಇದನ್ನರಿತ ಅಭಿವೃದ್ಧಿ ಪ್ರಾಧಿಕಾರ ಭಕ್ತರಿಗೆ ಗುಡ್ ನ್ಯೂಸ್ವೊಂದನ್ನು ನೀಡುತ್ತಿದೆ.ಹೌದು ರಾಜ್ಯದಲ್ಲಿರುವ ದೇಗುಲಗಳಲ್ಲಿ ಅತೀ ಹೆಚ್ಚು ಆದಾಯ ಬರುವ ಎರಡನೇ ದೇವಾಲಯ ಎಂದರೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ದೇವಸ್ಥಾನ.ಇಲ್ಲಿಗೆ ಪ್ರತಿನಿತ್ಯ ಸಾವಿರಾರು ಭಕ್ತರು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದು ಧನ್ಯರಾಗುತ್ತಾರೆ.