ಬೆಂಗಳೂರು: ಮೌಲ್ಯಮಾಪನದಲ್ಲಿ ಸಣ್ಣಪುಟ್ಟದೋಷ ಸರಿಪಡಿಸುವುದು ಸೇರಿದಂತೆ ವಿವಿಧ ಕಾರಣಗಳಿಂದ ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಮೇ 19ಕ್ಕೆ ಪ್ರಕಟವಾಗುವ ಸಾಧ್ಯತೆ ಇದೆ. ಇದೇ ವೇಳೆ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ರಾಜ್ಯದ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿಯೂ ಸಿಕ್ಕಿದೆ. ಉತ್ತೀರ್ಣಕ್ಕೆ ಬೆರಳೆಣಿಕೆಯಷ್ಟುಅಂಕಗಳ ಕೊರತೆ ಹೊಂದಿರುವವರಿಗೆ ಈ ಬಾರಿಯೂ ಗರಿಷ್ಠ ಮೂರು ವಿಷಯದಲ್ಲಿ ಶೇ.10ರಷ್ಟು ಗ್ರೇಸ್ ಅಂಕ ನೀಡಿ ಪಾಸ್ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಶಿಕ್ಷ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.