ಬೆಂಗಳೂರು ಸೇರಿ ರಾಜ್ಯದಲ್ಲಿ ಹಾಜರಾತಿ ಕೊರತೆ ಇದ್ದ ಮಕ್ಕಳಿಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಹಾಜರಾತಿ ಕೊರತೆಯಿದ್ದ ಪರೀಕ್ಷೆಯಿಂದ ವಂಚಿತರಾಗಿದ್ದ 26 ಸಾವಿರಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಂಡು ಪೂರಕ ಪರೀಕ್ಷೆ ಬರೆಯಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವಕಾಶ ನೀಡಿದೆ.