ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ವರ್ ಸಮಸ್ಯೆ ಕಾಡುತ್ತಿದೆ. ಅಲ್ಲದೇ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮೀ ತಲುಪಿಸುವ ನಿಟ್ಟಿನಲ್ಲಿ ಬಿಬಿಎಂಪಿ ಹೊಸ ಪ್ಲಾನ್ ಗೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಣಿಗಾಗಿ ಅವಕಾಶ ಮಾಡಿಕೊಡುತ್ತಿದೆ.ಬಿಬಿಎಂಪಿಯ 198 ವಾರ್ಡ್ ಗಳಲ್ಲಿ ಸ್ಥಾಪಿಸುವ ಸಹಾಯ ಕೇಂದ್ರಗಳಲ್ಲಿ ಅರ್ಹ ಫಲಾನುಭವಿಗಳು ತೆರಳಿ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಯೋಜನೆಗೆ