ಬೆಂಗಳೂರು : ಈಗಾಗಲೇ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಬಿಎಂಟಿಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಸ್ತರಣೆ ಮಾಡಿತ್ತು. ಇದೀಗ ಮತ್ತೆ ಶಾಲಾ - ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯು ಆಗಸ್ಟ್ ಮತ್ತು ಸೆಪ್ಟೆಂಬರ್ 2021ರ ಮಾಹೆಯಲ್ಲಿ ಶಾಲಾ -ಕಾಲೇಜುಗಳನ್ನು ಪ್ರಾರಂಭ ಮಾಡಿರುತ್ತದೆ.