ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರು ಸೇರ್ಪಡೆಗೆ ಅ.5ರಿಂದ 13ರವರೆಗೆ ಆಹಾರ ಇಲಾಖೆ ಮತ್ತೊಮ್ಮೆ ಅವಕಾಶ ನೀಡಿದೆ. ಬೆಂಗಳೂರು ವಲಯದ ಜಿಲ್ಲೆಗಳಲ್ಲಿ ಅ.5ರಿಂದ 7ರವರೆಗೆ, ಕಲಬುರಗಿ ವಲಯದಲ್ಲಿ ಅ.8ರಿಂದ 10ರವರೆಗೆ ಮತ್ತು ಬೆಳಗಾವಿ ವಲಯದಲ್ಲಿ ಅ.11ರಿಂದ 13ರವರೆಗೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ರದ್ದು ಮತ್ತು ಸೇರ್ಪಡೆ, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ, ಮಹಿಳಾ ಮುಖ್ಯಸ್ಥರ ಹೆಸರು